ನಿಖಿಲ್ ಕುಮಾರಸ್ವಾಮಿ ಹುಬ್ಬಳ್ಳಿಗೆ

Published on

ಹುಬ್ಬಳ್ಳಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು ಅ. 19ರಂದು ಬೆಳಗ್ಗೆ 10.15ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ.

ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ ವೆಂಕಟರಾವ್ ನಾಡಗೌಡ ಹಾಗೂ ಪಕ್ಷದ ಇತರ ಮುಖಂಡರು ಬೆಂಗಳೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ನಂತರ ರಸ್ತೆ ಮೂಲಕ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net