ಜೆಡಿಎಸ್ ಮುಖಂಡರ ಸಭೆ ಇಂದು

17blrp2
ಜೆಡಿಎಸ್ ತಾಲೂಕು ಅಧ್ಯಕ್ಷ ತೋ.ಚ.ಅನಂತ ಸುಬ್ಬರಾಯ
Published on

ಬೇಲೂರು: ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜ.18ರಂದು ಪಟ್ಟಣದ ಕೋಟೆ ಬಯಲು ರಂಗಮಂದಿರದಲ್ಲಿ ಜೆಡಿಎಸ್ ಮುಖಂಡರ ಸಭೆ ಕರೆಯಲಾಗಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ತೋ.ಚ.ಅನಂತ ಸುಬ್ಬರಾಯ ಹೇಳಿದರು.

ಏಪ್ರಿಲ್‌ನಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ವಿವಿಧ ಸಹಕಾರ ಸಂಘಗಳ ಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಸಭೆ ಆರಂಭವಾಗಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ, ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಜಿಪಂ ಮಾಜಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ತಾಲೂಕು ಜೆಡಿಎಸ್ ಕಾರ್ಯದರ್ಶಿ ಸಿ.ಎಚ್.ಮಹೇಶ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಸುಭಾನ್, ಮಹಿಳಾ ಘಟಕದ ಅಧ್ಯಕ್ಷೆ ಜಿ.ಟಿ.ಇಂದಿರಾ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net