ಜೆಡಿಎಸ್ ಕಾರ್ಯಕರ್ತರ ಸಭೆ

Published on

ಹುಬ್ಬಳ್ಳಿ: ಜನತಾದಳ ಜಾತ್ಯತೀತ ಪಕ್ಷದ ಮಹಾನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ ಸಂಯುಕ್ತಾಶ್ರಯದಲ್ಲಿ ಲೋಕಸಭಾ ಚುನಾವಣೆ ತಯಾರಿ ಕುರಿತು ಚಚಿರ್ಸಲು ಮಾ. 16ರಂದು ಬೆಳಗ್ಗೆ 11ಕ್ಕೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ.

ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಹಾಗೂ ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಬಿ.ಬಿ. ಗಂಗಾಧರಮಠ ಅಧ್ಯಕ್ಷತೆ ವಹಿಸುವರು.

ಮಾಜಿ ಸಚಿವರಾದ ಹನುಮಂತಪ್ಪ ಆಲ್ಕೋಡ, ಕೆ.ಎನ್. ಗಡ್ಡಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಇತರರು ಅತಿಥಿಗಳಾಗಿ ಪಾಲ್ಗೊಳ್ಳುವರು.

ಪಕ್ಷದ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ನಿಕಟ ಪೂರ್ವ ಜಿಲ್ಲಾ ಕಾರ್ಯದರ್ಶಿ ನವೀನಕುಮಾರ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net