ಮಚ್ಚಿನಿಂದ ಕೊಚ್ಚಿ ಜೆಡಿಎಸ್​ ನಗರಸಭೆ ಸದಸ್ಯನ ಬರ್ಬರ ಹತ್ಯೆ

Murder
Published on

ರಾಯಚೂರು: ಜೆಡಿಎಸ್​ ನಗರಸಭೆ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ನಗರದ ಜಾಕೀರ್ ಹುಸೇನ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದಿದೆ.

ರಾಯಚೂರು ನಗರದ ವಾರ್ಡ್ ನಂ 8ರ ಮಕ್ಬೂಲ್ (42) ಕೊಲೆಯಾಗಿರುವ ನಗರಸಭೆ ಸದಸ್ಯ. ಹಳೇ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸೋಮವಾರ ರಾತ್ರಿ ಏಕಾಏಕಿ ದಾಳಿ ಮಾಡಿದ ನಾಲ್ಕು ಜನ ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಕ್ಬೂಲ್​ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಗಂಭೀರ ಗಾಯದಿಂದ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಮಕ್ಬೂಲ್​ರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಕ್ಬೂಲ್ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ರಾಯಚೂರು ಎಸ್ಪಿ ಪ್ರಕಾಶ್ ನಿಕ್ಕಮ್, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net