ಬೆಳಗಾವಿ ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರ್ಪಡೆ

IMG-20230323-WA0002.jpg
Published on


ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್, ಬಿಜೆಪಿ, ರೈತ ಸಂಘಟನೆಗಳ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ತಿಳಿಸಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ನಡೆದ ಸರಳ ಕಾರ್ಯಕ್ರಮದಲ್ಲಿ ರಾಯಾಬಾಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರದೀಶ ಮಾಳಗಿ, ಕುಡಚಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಆನಂದ ಮಾಳಗಿ ಹಾಗೂ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಉತ್ತರ ಕರ್ನಾಟಕ ಅಧ್ಯಕ್ಷ ಶಿವಾನಂದ ಮುಗಳಿಹಾಳ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂದರು.
ಈಗಾಗಲೇ ಬಿಜೆಪಿ, ಕಾಂಗ್ರೆಸ್‌ನಿಂದ ಹಾಲಿ, ಮಾಜಿ ಶಾಸಕರು ಜೆಡಿಎಸ್ ಸೇರ್ಪಡೆಗೆ ಸಜ್ಜಾಗಿದ್ದು, ಚುನಾವಣೆ ಘೋಷಣೆಯಾಗುತ್ತಿದ್ದಂತೆ ಎಲ್ಲರು ಪಕ್ಷಕ್ಕೆ ಬರಲಿದ್ದಾರೆ. ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಕ್ಷಗಳ ಸ್ಥಳೀಯ ಮುಖಂಡರು ಕಾರ್ಯಕರ್ತರ ಸಮೇತ ಪಕ್ಷಕ್ಕೆ ಬರುತ್ತಿದ್ದಾರೆ. ಯಾವುದೇ ರೀತಿಯ ಷರತ್ತುಗಳು ಇಲ್ಲದೆ ಜೆಡಿಎಸ್‌ಗೆ ಬರುತ್ತಿದ್ದಾರೆ. ಈ ಬಾರಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net