ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಶಕ್ತಿಯುತ

jds
ಶಿವಮೊಗ್ಗದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಚಾಲನೆ ನೀಡಿದರು. ಕೆ.ಬಿ.ಪ್ರಸನ್ನಕುಮಾರ್, ಕಡಿದಾಳ್ ಗೋಪಾಲ್, ದೀಪಕ್ ಸಿಂಗ್, ಗಂಧದ ಮನೆ ನರಸಿಂಹ, ಗೀತಾ ಸತೀಶ್ ಇತರರಿದ್ದರು.
Published on

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಸದೃಢವಾಗಿದೆ. ಈಗ ಆರಂಭವಾಗಿರುವ ಸದಸ್ಯತ್ವ ಅಭಿಯಾನದ ಜವಾಬ್ದಾರಿಯನ್ನು ಎಲ್ಲ ಮುಖಂಡರೂ ನಿರ್ವಹಿಸಬೇಕು ಎಂದು ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಹೇಳಿದರು.

ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ಮಂಗಳವಾರ ಮಿಸ್ಡ್‌ಕಾಲ್ ಮೂಲಕ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಪಕ್ಷ ಶಕ್ತಿಯುತವಾಗಿದೆ. ನಿಖಿಲ್ ಕುಮಾರಸ್ವಾಮಿ ರಾಜ್ಯ ಯುವ ಜನತಾದಳದ ಅಧ್ಯಕ್ಷರಾದ ಬಳಿಕ ಪ್ರತಿ ಜಿಲ್ಲೆಗೂ ಭೇಟಿ ನೀಡಿ ಪಕ್ಷವನ್ನು ಸಂಘಟಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ಬೆಂಗಳೂರಿನಲ್ಲಿ ನಡೆದ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ರಾಜ್ಯದೆಲ್ಲೆಡೆ ನಿಖಿಲ್‌ಗೆ ಉತ್ತಮ ಸ್ವಾಗತ ದೊರೆತಿದೆ. ಅವರು ಒಳ್ಳೆಯ ಯುವ ನಾಯಕನಾಗಿ ಹೊರಹೊಮ್ಮಿದ್ದಾರೆ. ಎಚ್.ಡಿ.ದೇವೇಗೌಡರು ಪ್ರಧಾನಿ ಆಗಿದ್ದಾಗ, ಕುಮಾರಣ್ಣ ಸಿಎಂ ಆಗಿದ್ದ ಸಂದರ್ಭ ಮಾಡಿದ್ದ ಜನಪರ ಕಾರ್ಯಗಳೇ ಜೆಡಿಎಸ್‌ಗೆ ಶ್ರೀರಕ್ಷೆ ಎಂದು ಹೇಳಿದರು.

ದೇವೇಗೌಡರು ನೀರಾವರಿಗೆ ಹೆಚ್ಚು ಒತ್ತು ನೀಡಿದ್ದರು. ಅವರು ಪ್ರಧಾನಿಯಾಗಿ ಐದು ವರ್ಷ ಪೂರ್ಣಗೊಳಿಸಬೇಕಿತ್ತು. ಆಗ ದೇಶ ಸುಭೀಕ್ಷವಾಗುತ್ತಿತ್ತು. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅನೇಕ ಕಾರ್ಯಕ್ರಮ ಅನುಷ್ಠಾನಕ್ಕೆ ತಂದರು. ಈಗಲೂ ರಾಜ್ಯದ ಜನ ಅವರನ್ನು ನೆನಪಿಸಿಕೊಳ್ಳುತ್ತಾರೆ. ಕಾರ್ಯಕರ್ತರು ಮತ್ತು ಮುಖಂಡರು ಬೂತ್ ಮಟ್ಟದಲ್ಲಿ ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲನೀಡಿ, ಪಕ್ಷವನ್ನು ಸಂಘಟಿಸಬೇಕು ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್, ಕಾರ್ಯಾಧ್ಯಕ್ಷ ರಾಮಕೃಷ್ಣ, ಪ್ರಮುಖರಾದ ಶಾರದಾ ಅಪ್ಪಾಜಿ ಗೌಡ, ದೀಪಕ್ ಸಿಂಗ್, ಗಂಧದಮನೆ ನರಸಿಂಹ, ಮಧುಕುಮಾರ್, ಗೀತಾ ಸತೀಶ್, ಸುರೇಶ್, ಸಂಗಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net