ಸಚಿವ ಸುಧಾಕರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

HYR SUDHAKAR
Published on

ಬೆಂಗಳೂರು: ದಲಿತರ ಭೂಮಿ ಕಬಳಿಕೆ ಹಾಗೂ ಅವರ ಮೇಲೆ ದೌರ್ಜನ್ಯ ಎಸಗಿರುವ ಸಚಿವ ಡಿ. ಸುಧಾಕರ್ ವಿರುದ್ಧ ಬೆಂಗಳೂರು ಮಹಾನಗರ ಜನತಾದಳ ಬೃಹತ್ ಪ್ರತಿಭಟನೆ ನಡೆಸಲಿದೆ.

ಬುಧವಾರ ಬೆಳಗ್ಗೆ 11ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದು, ಪಕ್ಷದ ಹಿರಿಯ ಮುಖಂಡರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಬಿಬಿಎಂಪಿ ಮಾಜಿ ಸದಸ್ಯರು, ಪಕ್ಷದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಕೂಡ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net