ಸುಧಾಕರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

Jayanna jds hyr
Published on

ಹಿರಿಯೂರು: ದಲಿತರ ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಸಚಿವ ಡಿ.ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನೇತೃತ್ವದಲ್ಲಿ ಸೆ.14ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಎಂ.ಜಯಣ್ಣ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಪಕ್ಷದ ಮುಖಂಡರು-ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಗುರುವಾರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಆಸ್ಪತ್ರೆ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಚಿವರ ರಾಜೀನಾಮೆ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಮುಖಂಡರಾದ ಎಂ.ರವೀಂದ್ರಪ್ಪ, ಡಿ.ಯಶೋಧರ್, ತಾಲೂಕಾಧ್ಯಕ್ಷ ಹನುಮಂತರಾಯ, ಶಿವಶಂಕರ್, ರಂಗನಾಥ್, ಕಿರಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net