ವಿಜಯಪುರದಲ್ಲಿ ಜೆಡಿಎಸ್ ಪ್ರತಿಭಟನೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅಸಮರ್ಪಕ ಅನುಷ್ಠಾನ ಖಂಡಿಸಿ ವಿಜಯಪುರದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು. ಅಪ್ಪುಗೌಡ ಪಾಟೀಲ (ಮನಗೂಳಿ), ಬಿ.ಜಿ. ಪಾಟೀಲ, ಸುನೀತಾ ಚವ್ಹಾಣ ಮತ್ತಿತರರಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅಸಮರ್ಪಕ ಅನುಷ್ಠಾನ ಖಂಡಿಸಿ ವಿಜಯಪುರದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು. ಅಪ್ಪುಗೌಡ ಪಾಟೀಲ (ಮನಗೂಳಿ), ಬಿ.ಜಿ. ಪಾಟೀಲ, ಸುನೀತಾ ಚವ್ಹಾಣ ಮತ್ತಿತರರಿದ್ದಾರೆ.
Published on

ವಿಜಯಪುರ: ಗ್ಯಾರಂಟಿ ಯೋಜನೆಗಳ ಅಸಮರ್ಪಕ ಅನುಷ್ಠಾನ ಹಾಗೂ ಬಸ್ ದರ ಸೇರಿ ವಿವಿಧ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜನತಾದಳ (ಜಾತ್ಯತೀತ) ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಪಂಚ ಗ್ಯಾರಂಟಿ ಯೋಜನೆಯ ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಗೃಹಲಕ್ಷ್ಮಿಯೋಜನೆಯಡಿ ಪ್ರತಿ ತಿಂಗಳು ನೀಡಬೇಕಿದ್ದ 2 ಸಾವಿರ ರೂ. ನೀಡದೆ ದ್ರೋಹ ಮಾಡುತ್ತಿದೆ. ಲೋಕಸಭೆ ಹಾಗೂ ಉಪ ಚುನಾವಣೆ ಸಂದರ್ಭದಲ್ಲಿ ಹಣ ಹಾಕಿ ರಾಜಕೀಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಸರ್ಕಾರ ಗೃಹಲಕ್ಷ್ಮಿ ಹಣವನ್ನು ಹೇಳಿದಂತೆ ಯಾವ ದಿನಾಂಕದಂದು ನೀಡುತ್ತಾರೆ ಎಂದು ಘೋಷಿಸಲಿ. ವಿದ್ಯಾರ್ಥಿಗಳ ಯುವನಿಧಿ ಹಣ ಸಹ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ. ಅಲ್ಲದೆ, ಸದ್ಯ ಏಕಾಏಕಿ ಬಸ್ ದರ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ರಾಜ್ಯದ ಜನರ ಮೇಲೆ ಹೊರೆ ಹಾಕುತ್ತಿರುವುದು ಖಂಡನೀಯ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಸರ್ಕಾರ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸಿಕೊಂಡು ಹೋಗುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಪಕ್ಷದ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ (ಮನಗೂಳಿ), ವಿಪ ಮಾಜಿ ಸದಸ್ಯ ಬಿ.ಜಿ. ಪಾಟೀಲ, ರಾಜ್ಯ ಉಪಾಧ್ಯಕ್ಷೆ ಸುನೀತಾ ಚವ್ಹಾಣ, ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಹಿಪ್ಪರಗಿ, ನಿಂಗನಗೌಡ ಸೋಲಾಪುರ, ಪೀರಪಾಶ್ಯಾ ಗಚ್ಚಿನಮಹಲ, ಸುಜಾತಾ ಕಣಬೂರ, ಸುಭಾಸ ನಾಯಕ, ಸಂಜು ರಾಠೋಡ, ಮನೋಜ ಬಿರಾದಾರ, ಸಂಗಮೇಶ ಹಡಪದ, ಶಿವಾನಂದ ಹಿರೇಕುರುಬರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net