ಕೆ.ಎನ್.ರಾಜಣ್ಣ ಹೇಳಿಕೆಗೆ ಖಂಡಿಸಿ ಮಂಡ್ಯದಲ್ಲಿ ಜೆಡಿಎಸ್​ ಕಾರ್ಯಕರ್ತರಿಂದ ಬೃಹತ್​ ಪ್ರತಿಭಟನೆ

MandyaJDS
Published on

ಮಂಡ್ಯ: ಮಾಜಿ‌ ಪ್ರಧಾನಿ ದೇವೇಗೌಡರ ವಿರುದ್ದ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರ‌ವನ್ನು ಖಂಡಿಸಿ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗಿದ್ದು, ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ಅಣಕು ಶವಯಾತ್ರೆ ಮೂಲಕ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಶವಯಾತ್ರೆಯ ಮೆರವಣಿಗೆ ವೇಳೆ ಕಾರ್ಯಕರ್ತರಿಂದ ಪ್ರತಿಕೃತಿಯನ್ನು ತಾಲೂಕು ಕಚೇರಿವರೆಗೆ ತಂದು ದಹಿಸಿದರು.

ಪ್ರತಿಭಟನೆಯಿಂದಾಗಿ ಮೈಸೂರು-ತುಮಕೂರು ಹೆದ್ದಾರಿ ಸಂಚಾರಕ್ಕೆ ಕೆಲಕಾಲ ಅಡ್ಡಿಯುಂಟಾಗಿತ್ತು, ತಕ್ಷಣವೇ ಕೆ.ಎನ್​. ರಾಜಣ್ಣ ಅವರನ್ನು ಕಾಂಗ್ರೆಸ್​ ಪಕ್ಷದಿಂದ ಉಚ್ಛಾಟಿಸಬೇಕೆಂದು ಕಾರ್ಯಕರ್ತರು ಆಗ್ರಹಿಸಿದರು. ಇನ್ನೂ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net