ಹಾಲು, ವಿದ್ಯುತ್ ದರ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

Jds Protest
Published on

ಮೈಸೂರು: ರಾಜ್ಯ ಸರ್ಕಾರ ಹಲವು ಭಾಗ್ಯಗಳನ್ನು ಜನರಿಗೆ ನೀಡಿ ಮತ್ತೊಂದೆಡೆ ವಿದ್ಯುತ್, ಹಾಲಿನ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಜೆಡಿಎಸ್ ನಗರ ಘಟಕದಿಂದ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರ ಇದೀಗ ಗೃಹ ಜ್ಯೋತಿ ಯೋಜನೆ ಜಾರಿಗೊಳಿಸಿದ್ದು, 200 ಯೂನಿಟ್ ಒಳಗೆ ವಿದ್ಯುತ್ ಬಳಸುವ ಪ್ರತಿ ಮನೆಗಳಿಗೆ ಈ ಯೋಜನೆ ಸೌಲಭ್ಯ ದೊರೆಯಲಿದೆ. ಆದರೆ, ಮತ್ತೊಂದೆಡೆ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರಿಗೆ ಬರೆ ಎಳೆಯುವ ಕಾರ್ಯವನ್ನು ಸರ್ಕಾರ ಮಾಡಿದೆ. ಅದೇ ರೀತಿ ಹಾಲಿನ ದವರನ್ನು ಲೀಟರ್‌ಗೆ 3 ರೂ. ಏರಿಕೆ ಮಾಡಿರುವುದು ಖಂಡನೀಯ. ಇದರೊಂದಿಗೆ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿದ್ದು, ಬೆಲೆ ಏರಿಕೆ ನಿಯಂತ್ರಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಜೆಡಿಎಸ್ ನಗರಾಧ್ಯಕ್ಷ ಕೆ.ಟಿ. ಚೆಲುವೇಗೌಡ, ಮಾಜಿ ಮೇಯರ್ ಆರ್.ಲಿಂಗಪ್ಪ, ನಗರ ಪಾಲಿಕೆ ಸದಸ್ಯರಾದ ಅಶ್ವಿನಿ ಅನಂತು, ಪ್ರೇಮಾ ಶಂಕರೇಗೌಡ, ಎಸ್‌ಬಿಎಂ ಮಂಜು, ಸಿ. ರಮೇಶ್, ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net