

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಗ್ಯಾರಂಟಿ ಹೆಸರಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ, ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು ಹಣ ಪಾವತಿಸಬೇಕು ಎಂದು ಆಗ್ರಹಿಸಿ ಜಾತ್ಯತೀತ ಜನತಾ ದಳ ಪಕ್ಷದ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆ ಹಾಗೂ ಧಾರವಾಡ ಗ್ರಾಮಾ0ತರ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಗೃಹಲಕ್ಷ್ಮೀ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಹಣ ಜಮೆಯಾಗುತ್ತಿಲ್ಲ. ತಾಂತ್ರಿಕ ಸಮಸ್ಯೆಯ ನೆಪ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಯಾವುದಾದರೂ ಚುನಾವಣೆ ಸಮೀಪಿಸಿದಾಗ ಮಾತ್ರ ಹಣ ಜಮೆಯಾಗುತ್ತದೆ. ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು ಹಣ ಪಾವತಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಲಾಯಿತು.
ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಗ್ರಾಮಾ0ತರ ಜಿಲ್ಲಾಧ್ಯಕ್ಷ ಬಿ.ಬಿ. ಗಂಗಾಧರಮಠ, ಮುಖಂಡರಾದ ನವೀನಕುಮಾರ, ಲಕ್ಷ್ಮೀ ಹಿಂಡಸಗೇರಿ, ಮಾರುತಿ ಹಿಂಡಸಗೇರಿ, ಬಾಷಾಸಾಬ ಮುದಗಲ್, ವಿನಾಯಕ ಗಾಡಿವಡ್ಡರ, ಮಂಜುನಾಥ ಹಗೇದಾರ, ನಾಗರಾಜ ಗುಡದರಿ, ದೇವರಾಜ ಕಂಬಳಿ, ಪೂರ್ಣಿಮಾ ಸವದತ್ತಿ, ರೇಖಾ ನಾಯ್ಕರ, ಕರೆಪ್ಪ ಪೂಜಾರ, ಭೀಮರಾಯ ಗುಡೇನಕಟ್ಟಿ, ಶಾಹೀದ್, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.