ಪಕ್ಷ ಸಂಘಟಿಸಿ ಅಧಿಕಾರಕ್ಕೆ ಬರೋಣ: ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ.ಆರ್.ರಾಮಚಂದ್ರು ಹೇಳಿಕೆ

1 (1)
Published on

ಮಂಡ್ಯ: ವಿಧಾನಸಭಾ ಚುನಾವಣೆ ಸೋಲು ಕೊನೆಯಲ್ಲ. ಮುಂದಿನ ದಿನದಲ್ಲಿ ಇನ್ನಷ್ಟು ಅವಕಾಶ ಸಿಗಲಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ.ಆರ್.ರಾಮಚಂದ್ರು ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಕೆರಗೋಡು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಕೃತಜ್ಞತಾ ಯಾತ್ರೆ ನಡೆಸಿದ ಅವರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರುಳು ದುಡಿದ ಪರಿಶ್ರಮದಿಂದ 59 ಸಾವಿರಕ್ಕೂ ಹೆಚ್ಚು ಮತಗಳು ಬಂದಿವೆ. ಸೋಲಿನಿಂದ ಹಲವು ಪಾಠ ಕಲಿತಿದ್ದೇವೆ. ಇದು ಕೊನೆಯಲ್ಲ. ಎಲ್ಲರೂ ಸೇರಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಮೂಲಕ ಮತ್ತೆ ಅಧಿಕಾರಕ್ಕೆ ತರೋಣ. ಮುಂದಿನ ದಿನಗಳಲ್ಲಿ ನಿಮ್ಮ ಕಷ್ಟ ಸುಖಗಳಲ್ಲಿ ನಾನು ಭಾಗಿಯಾಗುತ್ತೇನೆ. ಯಾರು ಧೃತಿಗೆಡುವುದು ಬೇಡ ಎಂದು ಹೇಳಿದರು.

ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್, ಗ್ರಾ.ಪಂ ಮಾಜಿ ಅಧ್ಯಕ್ಷ ವಸಂತರಾಜು ಇತರರಿದ್ದರು. ಆಲಕೆರೆ, ಹೊನಗಳ್ಳಿಮಠ, ಮುದುಂಗೆರೆ, ಕೀಲಾರ ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ಧನ್ಯವಾದ ಅರ್ಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net