

ರಾಮನಗರ: ಕರ್ನಾಟಕ ಪ್ರದೇಶ ಜನಾತಾದಳ (ಜಾತ್ಯತೀತ) ಪಕ್ಷದ ಪದವೀಧರ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ವಕೀಲ ರಾಜಶೇಖರ್ ರವರನ್ನು ನೇಮಕ ಮಾಡಲಾಗಿದೆ.
ಜೆ.ಡಿ.ಎಸ್ ರಾಜ್ಯಾಧ್ಯಕ್ಷ ಸಿ.ಎ೦.ಇಬ್ರಾಹಿ೦, ರಾಜಶೇಖರ್ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರ ಮಾಡಿದರು. ಈ ವೇಳೆ ಮಾಜಿ ಮುಖ್ಯಮ೦ತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖಂಡರಾದ ಸಿ.ಎಸ್.ಜಯಕುಮಾರ್, ಮುಂತಾದವರು ಉಪಸ್ಥಿತರಿದ್ದರು.