ಪಟಾಕಿ ಸಿಡಿಸಿ ಸಂಭ್ರಮಿಸಿದ ಜೆಡಿಎಸ್ ಕಾರ್ಯಕರ್ತರು

14blrp2.
Published on

ಬೇಲೂರು: ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.


ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಮಹಿಳೆಯೊಬ್ಬರ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದೆ ಎಂಬುದು ತಿಳಿದಿದ್ದೇ ತಡ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಬಿಟ್ರುವಳ್ಳಿ ಉಮೇಶ್ ನೇತೃತ್ವದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಹಾಗೂ ರೇವಣ್ಣ ಪರವಾಗಿ ಘೋಷಣೆ ಕೂಗಿದರು.


ಜೆಡಿಎಸ್ ಮುಖಂಡರಾದ ಎಸ್.ಕೆ.ನಾಗೇಶ್, ಶ್ರೀವತ್ಸ, ಹೆಬ್ಬಾಳು ಗಿರೀಶ್, ಹರೀಶ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net