ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಅನಾವರಣ

17tnpnewsfile01
ತಿ.ನರಸೀಪುರದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ.ಅಶ್ವಿನ್ ಕುಮಾರ್ ಭಾಗವಹಿಸಿದ್ದರು.
Published on

ತಿ.ನರಸೀಪುರ: ಮುಂಬರುವ ವಿಧಾನಸಭಾ ಚುನಾವಣೆ ವೇಳೆಗೆ ಕ್ಷೇತ್ರದಲ್ಲಿ ಪಕ್ಷದ ಶಕ್ತಿ ಅನಾವರಣಗೊಳ್ಳಲಿದ್ದು, ಉತ್ತಮ ಫಲಿತಾಂಶ ಬರಲಿದೆ ಎಂದು ಮಾಜಿ ಶಾಸಕ ಎಂ.ಅಶ್ವಿನ್ ಕುಮಾರ್ ವಿಶ್ವಾಸವ್ಯಕ್ತಪಡಿಸಿದರು.

ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಬಾರಿಯ ಚುನಾವಣೆಯಲ್ಲಿ ಕೆಲವೊಂದು ಕಾರಣಗಳಿಂದ ಹಿನ್ನಡೆಯಾಯಿತು. ಆದರೆ ಈ ಬೆಳವಣಿಗೆಯಿಂದ ಯಾರೂ ವಿಚಲಿತರಾಗಿಲ್ಲ. ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ಹುಮ್ಮಸ್ಸಿನಿಂದಲೇ ಕ್ಷೇತ್ರದಲ್ಲಿ ಎಂದಿನಂತೆ ಪಕ್ಷದ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಚುನಾವಣೆ ಸಂದರ್ಭದಲ್ಲಾದ ಲೋಪ-ದೋಷಗಳನ್ನು ಸರಿಪಡಿಸಿಕೊಂಡು ಕೆಲಸ ಮಾಡಲಾಗುವುದು. ಕಹಿ ನೆನಪನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಮುಂದೆ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು.

ಪಕ್ಷದ ಕಾರ್ಯಕರ್ತರು ಕ್ಷೇತ್ರದಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಒಳ್ಳೆಯ ದಿನಗಳು ಬರಲಿದೆ ಎಂದು ಹೇಳಿದರು.

ಜೆಡಿಎಸ್ ಕ್ಷೇತ್ರಾಧ್ಯಕ್ಷ ಸಿ.ಬಿ.ಹುಂಡಿ ಚಿನ್ನಸ್ವಾಮಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಭುದೇವನಪುರ ರಮೇಶ್, ವೀರೇಶ್, ಜಿ.ಪಂ. ಮಾಜಿ ಸದಸ್ಯರಾದ ಎಸ್.ಎನ್.ಸಿದ್ದಾರ್ಥ್, ಜೈಪಾಲ್ ಭರಣಿ, ಕೆ.ಎನ್.ಪ್ರಭುಸ್ವಾಮಿ. ಮುಖಂಡರಾದ ವೈ.ಎಸ್.ರಾಮಸ್ವಾಮಿ, ಮೂಗೂರು ಶಿವಮೂರ್ತಿ, ಶಿವು, ರಾಜೇಶ್, ತಿರುಮ ಕೂಡಲು ಜಯರಾಮ, ಗುರುಪ್ರಸಾದ್, ಶೇಖರಪ್ಪ, ಉಮಾಪತಿ, ಕನ್ನಳ್ಳಿ ಶಿವಕುಮಾರ್, ಅಡುಗೆ ಕಂಟ್ರಾಕ್ಟರ್ ರಾಜಪ್ಪ, ಚೇತನ್ ಶೆಟ್ಟಿ, ನಿಲಸೋಗೆ ಮಹೇಶ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net