ಸಿಂದಗಿ ಅಭಿವೃದ್ಧಿಯಲ್ಲಿ ಜೆಡಿಎಸ್ ಪಾತ್ರ ಅಪಾರ

JDS's role in Sindagi's development is immense
ಆಲಮೇಲದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭೀಮಾಶಂಕರ ಬಂಟನೂರ ಜೆಡಿಎಸ್‌ಗೆ ಸೇರಿದರು.ಎಂ.ಎನ್. ಪಾಟೀಲ,ಗುಂಡು ಕರುಟೆ, ಪಿಂಟು ನಾಯ್ಕೋಡಿ ಇದ್ದರು.
Published on

ಆಲಮೇಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಸಿಂದಗಿ ಕ್ಷೇತ್ರದ ಅಭಿವೃದ್ಧಿಗೆ ಸಾಕಸ್ಟು ಕೊಡುಗೆ ನೀಡಿದ್ದಾರೆ ಎಂದು ಸಿಂದಗಿ ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಎನ್. ಪಾಟೀಲ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ಮತ್ತು ಪಕ್ಷದ ಸದಸ್ಯತ್ವ ಅಭಿಯಾನದ ನಂತರ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಆಲಮೇಲನ್ನು ತಾಲೂಕು ಕೇಂದ್ರ ಘೋಷಣೆ ಮಾಡಿದ್ದಾರೆ. ತೋಟಗಾರಿಕೆ ಕಾಲೇಜು ಮಂಜೂರು ಮಾಡಿಸಿದ ಕೀರ್ತಿ ಜೆಡಿಎಸ್ ಪಕ್ಷಕ್ಕೆ ಸಲ್ಲುತ್ತದೆೆ ಎಂದರು.

ಗುಂಡು ಕರುಟೆ, ಪಿಂಟು ನಾಯ್ಕೋಡಿ, ಭೀಮಾಶಂಕರ ಬಂಟನೂರ ಅವರಿಗೆ ಅಲಮೇಲ ತಾಲೂಕಿನ ಪಕ್ಷ ಸಂಘಟನೆ ಜವಾಬ್ದಾರಿ ನೀಡಲಾಗಿದೆ. ಅವರ ನೇತೃತ್ವದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಯಲಿದೆ ಎಂದರು. ಭೀಮಾಶಂಕರ ಬಂಟನೂರ ಜೆಡಿಎಸ್ ಪಕ್ಷ ಸೇರ್ಪಡೆಯಾದರು.

ಮುಖಂಡರಾದ ಗುಂಡು ಕರುಟೆ, ಪಿಂಟು ನಾಯ್ಕೋಡಿ, ಮಲ್ಲಿಕಾರ್ಜುನ ಕುಮಸಗಿ, ರವಿ ಶಿರವಾಳ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net