ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ ಜೀನ್ಸ್ ಪ್ಯಾಂಟ್, ಶೂ ನಿಷೇಧ

Untitled
Published on

ಧಾರವಾಡ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಪಡೆಯ (ಸಿಎಆರ್ ಮತ್ತು ಡಿಎಆರ್) 3,064 ಪುರುಷ ಕಾನ್ಸ್ಟೇಬಲ್ ಹುದ್ದೆಗಳಿಗೆ ಜ. 28ರಂದು ಲಿಖಿತ ಪರೀಕ್ಷೆ ನಿಗದಿಪಡಿಸಲಾಗಿದೆ. ರಾಜ್ಯಾದ್ಯಂತ ಅಂದು ಬೆಳಗ್ಗೆ 11ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತçಸಂಹಿತೆಯನ್ನು ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಎಂ. ಬ್ಯಾಕೋಡ ತಿಳಿಸಿದ್ದಾರೆ.

ಪುರುಷ ಅಭ್ಯರ್ಥಿಗಳಿಗೆ ಅರ್ಧ ತೋಳಿನ ಶರ್ಟ್ ಕಡ್ಡಾಯ. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸಬೇಕು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್ ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಽಸಲಾಗಿದ್ದು, ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣ ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದನ್ನು ನಿಷೇಽಸಲಾಗಿದೆ ಎಂದು ಎಸ್‌ಪಿ ಡಾ. ಬ್ಯಾಕೋಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net