

ದಾವಣಗೆರೆ: ಸ್ವಕುಳ ಸಾಳಿ ನೇಕಾರ ಸಮಾಜದಿಂದ ನಗರದ ಗುಂಡಿ ಮಹಾದೇವಪ್ಪ ಕಲ್ಯಾಣಮಂಟಪದಲ್ಲಿ ಆ.29ರಂದು ಭಗವಾನ್ ಶ್ರೀ ಜೀಹ್ವೇಶ್ವರ ಸ್ವಾಮಿ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳವಾರ ಬೆಳಗ್ಗೆ 10.30ಕ್ಕೆ ಶ್ರೀ ಜಡೇಸಿದ್ದ ಶಿವಯೋಗಿಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಮಾಜಿ ಸಂಸದ ಕೆ.ಸಿ. ಕೊಂಡಯ್ಯ, ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸನ್ಮಾನಿಸಲಾಗುವುದು.
ಸಮಾಜದ ಅಧ್ಯಕ್ಷ ಮೋಹನ್ ಪಿ. ಗಾಯಕವಾಡ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಯರ್ ವಿನಾಯಕ ಪೈಲ್ವಾನ್, ದೂಡಾ ಮಾಜಿ ಅಧ್ಯಕ್ಷ ಮಾಲತೇಶರಾವ್ ಜಾಧವ್, ಮಾಜಿ ಮೇಯರ್ ಅನಿತಾಬಾಯಿ ಜಾಧವ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.