ಔಷಧಿ ವ್ಯಾಪಾರಿಗಳ ಸಂಘದಿಂದ ಜೀವನ್‌ಗೆ ಸನ್ಮಾನ

sanmaana
Published on

ಮಡಿಕೇರಿ: ಭಾರತ ಔಷಧಿ ವ್ಯಾಪಾರಿಗಳ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಮಡಿಕೇರಿಯ ಸಪ್ತಗಿರಿ ಔಷಧಿ ಮಾರಾಟ ಸಂಸ್ಥೆಯ ಉದ್ಯಮಿ ಅಂಬೆಕಲ್ ಜೀವನ್ ಕುಶಾಲಪ್ಪರವರನ್ನು ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಇತ್ತೀಚೆಗೆ ಸನ್ಮಾನಿಸಲಾಯಿತು.


ಬೆಂಗಳೂರಿನ ನಗರಬಾವಿಯಲ್ಲಿರುವ ಕಿಂಗ್ಸ್ ಕ್ಲಬ್‌ನಲ್ಲಿ ಆಯೋಜಿತ ಸಮಾರಂಭದಲ್ಲಿ ಅಂಬೆಕಲ್ ಜೀವನ್ ಕುಶಾಲಪ್ಪರವರನ್ನು ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ್ ಸಿಂಧೆ, ರಾಷ್ಟ್ರೀಯ ಕಾರ್ಯದರ್ಶಿ ರಾಜೀವ್ ಸಿಂಘಾಲ್, ದಕ್ಷಿಣ ವಲಯ ಉಪಾಧ್ಯಕ್ಷ ಮೋಹನ್, ಮತ್ತಿತರರು ಗೌರವಿಸಿ ಸನ್ಮಾನಿಸಿದರು. ಇದೇ ಸಂದರ್ಭ ರಾಜ್ಯದ ವಿವಿಧ ಜಿಲ್ಲೆಗಳ ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದ ಜೀವನ್‌ರನ್ನು ಸನ್ಮಾನ ಮಾಡಲಾಯಿತು.


ರಾಷ್ಟ್ರೀಯ ಅಧ್ಯಕ್ಷ ಜಗನ್ನಾಥ್ ಶಿಂಧೆ ಮಾತನಾಡಿ, ಜೀವನ್‌ರವರು ರಾಷ್ಟ್ರೀಯ ಮಟ್ಟದಲ್ಲಿ ಔಷಧಿ ವ್ಯಾಪಾರಿಗಳ ವಿವಿಧ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ತಮಗಿದ್ದು, ಪಾಂಡಿಚೇರಿ, ಲಕ್ಷದ್ವೀಪದಲ್ಲಿ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿ ವಹಿಸಲುಅವರನ್ನು ಅಲ್ಲಿನ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ ಎಂದು ಹೇಳಿದರು.


ಈ ಸಂದರ್ಭ ಮಾತನಾಡಿದ ಜೀವನ್ ಕುಶಾಲಪ್ಪ, ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷಗಳಿಂದ ಔಷದಿ ಸಗಟು ವಹಿವಾಟು ನಡೆಸುತ್ತಿರುವ ತನ್ನನ್ನು ರಾಜ್ಯ ಸಂಘದ ಪದಾಧಿಕಾರಿಗಳು ರಾಷ್ಟ್ರೀಯ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಲು ಅವಕಾಶ ನೀಡಿದ್ದು ಸಂತೋಷ ತಂದಿದೆ. ಮುಂದಿನ ದಿನಗಳಲ್ಲಿ ಔಷಧಿ ವ್ಯಾಪಾರಸ್ಥರ ವಿವಿಧ ಸಮಸ್ಯೆಗಳ ಪರಿಹಾರ ಸಂಬಂಧಿತ ರಾಷ್ಟ್ರಮಟ್ಟದಲ್ಲಿ ಚಚಿ೯ಸುವುದಾಗಿ ಭರವಸೆ ನೀಡಿದರು. ಸದ್ಯದಲ್ಲಿಯೇ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ನೂತನ ಕೆಮಿಸ್ಟ್ ಭವನಕ್ಕೆ ಭೂಮಿಪೂಜೆ ನೆರವೇರಿಸುವುದಾಗಿ ಭರವಸೆ ನೀಡಿದರು.


ಈ ಸಂದರ್ಭ ಅಂಬೆಕಲ್ ಕುಶಾಲಪ್ಪ, ಸುಶೀಲಾ ಕುಶಾಲಪ್ಪ, ಸುಮಾಜೀವನ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ಅಂಬೆಕಲ್ ನವೀನ್, ಕೊಡಗು ಔಷಧಿ ವ್ಯಾಪಾರಿಗಳ ಸಂಘದ ನಿರ್ದೇಶಕರಾದ ಪುರುಷೋತ್ತಮ್, ವಸಂತ್ ಕುಮಾರ್, ಪ್ರಸಾದ್ ಗೌಡ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net