ಏಸು ಕ್ರಿಸ್ತ ದೇವರ ಅವತಾರ

25 LXR 1
Published on

ಲಕ್ಷ್ಮೇಶ್ವರ: ಮಾನವರ ಕಲ್ಯಾಣವನ್ನು ತನ್ನ ಜೀವನದ ಗುರಿಯಾಗಿಸಿಕೊಂಡು ಜಗತ್ತಿನ ಎಲ್ಲ ಜೀವ ರಾಶಿಗಳು ನೆಮ್ಮದಿಯಿಂದ ಜೀವನ ಸಾಗಿಸಬೇಕು ಎಂಬ ಸಂದೇಶ ಸಾರಿದ ಮಹಾನ್ ಪುರುಷ ಏಸು ಕ್ರಿಸ್ತ ದೇವರ ಅವತಾರವಾಗಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ಹೇಳಿದರು.

ಪಟ್ಟಣದ ಮುಕ್ತಿ ನಗರದಲ್ಲಿರುವ ಬ್ಲೆಸಿಂಗ್ ಗಾಸ್ಪೆಲ್ ಪ್ರೇಯರ್ ಚರ್ಚ್​ನಲ್ಲಿ ಬುಧವಾರ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಅವರು ಮಾತನಾಡಿದರು. ‘ಜಗತ್ತಿನಲ್ಲಿ ವಾಸ ಮಾಡುತ್ತಿರುವ ಸಕಲ ಜೀವರಾಶಿಗಳಿಗೆ ಲೇಸನ್ನು ಬಯಸುವುದೇ ನಿಜವಾದ ಧರ್ಮ. ಯಾವ ಧರ್ಮವು ಕನಿಷ್ಠವಲ್ಲ. ದೇವನೊಬ್ಬ ನಾಮ ಹಲವು ಎನ್ನುವಂತೆ ಏಸುಕ್ರಿಸ್ತನು ದೇವರ ಅವತಾರವಾಗಿದ್ದಾರೆ’ ಎಂದರು.

ಫಾದರ್ ರೆ.ಜಿ.ಎಂ. ನಾಯಕ್ ಮಾತನಾಡಿ, ಏಸುಕ್ರಿಸ್ತನ ಸಂದೇಶಗಳು ಸರ್ವರಿಗೂ ಏಳಿಗೆ ಬಯಸುತ್ತವೆ. ಬಡವ, ಬಲ್ಲಿದ, ಜಾತಿ, ವಿಜಾತಿ ಯಾವುದನ್ನು ನೋಡದೆ ಮನುಷ್ಯನನ್ನಾಗಿ ನೋಡು ಎನ್ನುವ ತತ್ವವನ್ನು ಇಡೀ ಜಗತ್ತಿಗೆ ಏಸುಕ್ರಿಸ್ತ ತೋರಿಸಿಕೊಟ್ಟಿದ್ದಾರೆ ಎಂದರು.

ಯಶೋಧಾ ನಾಯಕ್, ಪುರಸಭೆ ಸದಸ್ಯರಾದ ವಿಜಯ ಕರಡಿ, ರಾಮಪ್ಪ ಗಡದವರ, ನಾಗರಾಜ ಹಣಗಿ, ಡಿ.ಎಂ. ಪೂಜಾರ, ಶಿವಲಿಂಗ ಹೊತಗಿಮಠ, ಪ್ರೀತಂ, ಪ್ರವೀಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net