

ಹುಬ್ಬಳ್ಳಿ: ಬಸ್‌ನಲ್ಲಿ ಪ್ರಯಾಣಿಸುವ ವೇಳೆ ನವನಗರದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನ ಪರ್ಸ್‌ನಲ್ಲಿದ್ದ ಚಿನ್ನಾಭರಣ ಕಳ್ಳತನವಾದ ಘಟನೆ ವಿದ್ಯಾನಗರ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದೆ.
ನವನಗರದಿಂದ ಹೊಸೂರುವರೆಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಈ ಘಟನೆ ನಡೆದಿದೆ. 1.40 ಲಕ್ಷ ರೂ. ಮೌಲ್ಯದ 40 ಗ್ರಾಂ ಮಾಂಗಲ್ಯ, 50 ಸಾವಿರ ರೂ. ಮೌಲ್ಯದ 10 ಗ್ರಾಂ ತೂಕದ ಜುಮಕಿ ಕಳ್ಳತನವಾಗಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.