

ಪುತ್ತೂರು ಗ್ರಾಮಾಂತರ: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ಮಹಿಳೆಯೊಬ್ಬರು ಒಬ್ಬಂಟಿಯಾಗಿ ವಾಸವಿದ್ದ ಮನೆಯೊಂದರಿಂದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ಶೋಭಾ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳವಾರ ಬೆಳಗ್ಗೆ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ಸಂಜೆ ಹಿಂತಿರುಗಿ ಬಂದ ವೇಳೆ ಕಳವು ನಡೆದಿರುವುದು ಅರಿವಿಗೆ ಬಂದಿದೆ. ಮನೆ ಹಿಂಬಾಗಿಲನ್ನು ತೆರೆದು ಒಳನುಗ್ಗಿರುವ ಕಳ್ಳರು, ಮನೆಯೊಳಗಿದ್ದ ಕಪಾಟಿನ ಬೀಗ ಮುರಿದು ಬಟ್ಟೆಗಳನ್ನು ಚೆಲ್ಲಾಪಿಲ್ಲಿಗೈದು, ಪರ್ಸ್ನಲ್ಲಿರಿಸಿದ್ದ 24 ಗ್ರಾಂ ಚಿನ್ನ ಹಾಗೂ 5 ಸಾವಿರ ರೂ. ಮಾಡಿದ್ದಾರೆ.