ಚಿನ್ನಾಭರಣ ದೋಚಿದ್ದ ಕಳ್ಳನ ಬಂಧನ

0101
Published on

ಬೆಳಗಾವಿ: ಗೋಕಾಕ ತಾಲೂಕಿನ ರಾಜಾಪುರದ ಯಲ್ಲಮ್ಮ ದೇವಸ್ಥಾನದಲ್ಲಿ ಚಿನ್ನಾಭರಣ ದೋಚಿಕೊಂಡು ಹೋಗಿದ್ದ ವ್ಯಕ್ತಿಯೊಬ್ಬನನ್ನು ಗುರುವಾರ ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ತುಕ್ಕಾನಟ್ಟಿಯ ಲಕ್ಕಪ್ಪ ನಾಯಕ (22) ಬಂಧಿತ ವ್ಯಕ್ತಿ.

ರಾಜಾಪುರ ಗ್ರಾಮದ ಯಲ್ಲಮ್ಮ ದೇವಸ್ಥಾನದಲ್ಲಿನ 92,500 ರೂ. ಮೌಲ್ಯದ ಮೂರ್ತಿಯ ಮೇಲಿನ ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳು ಕಳ್ಳತನವಾಗಿರುವ ಕುರಿತು ಮಾ.18ರಂದು ಗ್ರಾಮಸ್ಥರು ದೂರು ನೀಡಿದ್ದರು.

ಈ ದೂರಿನನ್ವಯ ತನಿಖೆ ಕೈಗೊಂಡು ಕಳ್ಳನನ್ನು ಬಂಧಿಸಿ 92,500 ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಎಸ್‌ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net