ಚಿನ್ನಾಭರಣ ಕದ್ದವನ ಬಂಧನ

FotoJet
Published on

ಚನ್ನಪಟ್ಟಣ: ಇಲ್ಲಿನ ಮಹದೇಶ್ವರ ನಗರದಲ್ಲಿ ಕಳೆದ ತಿಂಗಳು ನಡೆದಿದ್ದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯ ತಾಜಾ ಮೋಯಿನುದ್ದೀನ್ ಬಂಧಿತ.

ಏಪ್ರಿಲ್ 19ರಂದು ಮಹದೇಶ್ವರ ನಗರದಲ್ಲಿನ ಮನೆಯೊಂದರ ಬೀಗ ಮುರಿದು ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದ. ಮನೆಗಳ್ಳತನ ಪ್ರಕರಣ ದಾಖಲಿಸಿಕೊಂಡಿದ್ದ ಗ್ರಾಮಾಂತರ ಠಾಣೆ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net