ಆನವಟ್ಟಿ: ತಲಗಡ್ಡೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೬ನೇ ತರಗತಿಯ ವಿದ್ಯಾರ್ಥಿ ಜಿನಾನ್ ಅಹ್ಮದ್ ಪಟೇಲ್ ಭದ್ರಾವತಿಯ ಕನಕ ಮಂಟಪದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ೪೧ ಕೆಜಿ ಕುಸ್ತಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.