ಜೆಜೆಎಂ,ಜಲಧಾರೆ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ

raichur
raichur
Published on

 ರಾಯಚೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು, ಜೆಜೆಎಂ ಮತ್ತು ಜಲಧಾರೆ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ನೀರು ಒದಗಿಸಿಕೊಡಬೇಕೆಂದು ಒತ್ತಾಯಿಸಿ ನಗರದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಗುರುವಾರ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳಿಂದ ಜಿಪಂ ಯೋಜನಾ ನಿರ್ದೇಶಕ ಶರಣಬಸವರಾಜ ಅವರಿಗೆ ಮನವಿ ಸಲ್ಲಿಸಿದರು.

ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಜೆಜೆಎಂ ಮತ್ತು ಜಲಧಾರೆ ಕುಡಿಯುವ ನೀರಿನ ಯೋಜನೆ 3 ಹಂತಗಳು ಕಾಮಗಾರಿ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದು, ಪೂರ್ಣಗೊಳಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಿ, ಗೂಳೆ ಹೋಗುವುದನ್ನು ತಡೆಗಟ್ಟಬೇಕು ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳಾದ ರಸ್ತೆ, ಕುಡಿಯುವ ನೀರು, ವಿದ್ಯುತ, ಬೀದಿದೀಪ ಅಳವಡಿಸಬೇಕು ಎಂದರು.

ಜೆಜೆಎಂ ಕಾಮಗಾರಿಗಳು ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ ಗುತ್ತಿಗೆದಾರರ ವಿರುದ್ಧ ಕ್ರಮ ವಹಿಸಬೇಕು, ರಸ್ತೆ ಬದಿಯಲ್ಲಿ ಪೈಪ್‌ಲೈನ್ ಹಾಕದೇ ಮಧ್ಯದಲ್ಲಿ ಹಾಕುತ್ತಿದ್ದನ್ನು ರದ್ದು ಮಾಡಬೇಕು. ಗ್ರಾಮಗಳಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ಕ್ರಮ ವಹಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೊಂಡಪ್ಪ ಕೆ, ಮುಖಂಡರಾದ ವೀರೇಶ ಜಲಗಾರ, ನಾಗರಾಜ, ಮಾಣಿಕ್ ಇಂಗಳೆ, ವೆಂಕಟೇಶ ಎಂಎಸ್, ರಘುನಾಥ್, ಚಿದಾನಂದ, ಭೀಮನಗೌಡ, ಶಿವರಾಜ ನಾಯಕ ಸೇರಿದಂತೆ ಅನೇಕರು ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net