ಜೆಜೆಎಂ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಿ

12-msk-1
Published on

ಮಸ್ಕಿ: ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಲ್ಲಿ ಸಾರ್ವಜನಿಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ನಾಗರಬೆಂಚಿ, ಮ್ಯಾದರಾಳ್, ಮಲ್ಲದಗುಡ್ಡ ಸೇರಿ ವಿವಿಧ ಗ್ರಾಮಗಳಲ್ಲಿ 2.50 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ಅಭಿವೃದ್ಧಿ ಹಾಗೂ ಜೆಜೆಎಂ ಕಾಮಗಾರಿಗೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು. ಜೆಜೆಎಂ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಕ್ಷೇತ್ರದ ಜನರ ಮನೆ-ಮನೆಗೆ ನೀರು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net