ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

25SPT1
ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ವಲಯದ ಕಿಬ್ಬೆಟ್ಟ ಗ್ರಾಮದಲ್ಲಿ ನಡೆದ ಸರಸ್ವತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಕೆ.ಎನ್.ದೀಪಕ್ ಉದ್ಘಾಟಿಸಿದರು. ರೇಷ್ಮಾ, ಸುಂದರ್, ಲಕ್ಷ್ಮಣ್, ಜಗನ್ನಾಥ್ ಇದ್ದರು.
Published on

ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಸೋಮವಾರಪೇಟೆ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶಾಂತಳ್ಳಿ ವಲಯದ ಕಿಬ್ಬೆಟ್ಟ ಗ್ರಾಮದಲ್ಲಿ ಸರಸ್ವತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಕೆ.ಎನ್.ದೀಪಕ್ ಉದ್ಘಾಟಿಸಿ, ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಹಲವಾರು ಮಹಿಳೆಯರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಪ್ರಬುದ್ಧತೆಯನ್ನು ಹೊಂದಿದ್ದಾರೆ. ಯೋಜನೆಯಿಂದ ಸಾಕಷ್ಟು ಸೌಲಭ್ಯಗಳು ಮಹಿಳೆಯರಿಗೆ ಸಿಗುತ್ತಿದ್ದು, ಇದರಿಂದ ಹಲವಾರು ಕುಟುಂಬಗಳು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ. ಇನ್ನೂ ಹೆಚ್ಚಿನ ಲಾಭವನ್ನು ಯೋಜನೆಯಿಂದ ಪಡೆದುಕೊಳ್ಳಬೇಕೆಂದರು.

ಒಕ್ಕೂಟದ ಅಧ್ಯಕ್ಷೆ ರೇಷ್ಮಾ, ಮಾಜಿ ಅಧ್ಯಕ್ಷ ಸುಂದರ್, ವಲಯದ ಮೇಲ್ವಿಚಾರಕ ಲಕ್ಷ್ಮಣ್, ಅಯ್ಯಪ್ಪಸ್ವಾಮಿ ದೇವಾಲಯದ ಅಧ್ಯಕ್ಷ ಜಗನ್ನಾಥ್, ಪಂಚಾಯಿತಿ ಮಾಜಿ ಸದಸ್ಯೆ ಜಾನಕಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವನಾ, ಸೇವಾ ಪ್ರತಿನಿಧಿ ನಿಖಿತಾ ಇದ್ದರು.
ಮುಂಗಾರು ಮಳೆಯಲ್ಲಿ ಮನೆ ಕಳೆದುಕೊಂಡ ತನುಶ್ರೀ ಅವರಿಗೆ ಮನೆ ನಿರ್ಮಾಣದ ಪತ್ರವನ್ನು ವಿತರಿಸಲಾಯಿತು. ಆಟೋಟ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net