

ಕಾರ್ಕಳ: ಗಣಿತನಗರ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನದಲ್ಲಿ 9 ಮಂದಿ 600ಕ್ಕೂ ಅಧಿಕ ಅಂಕ ಪಡೆದಿದ್ದಾರೆ. ಈ ಮೂಲಕ 126 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಗಳಿಸಿದ್ದಾರೆ.
ಸಹನಾ ಎನ್.623 ಅಂಕಗಳೊಂದಿಗೆ ಶಾಲೆಗೆ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ 3ನೇ ಸ್ಥಾನಿಯಾಗಿ, ಶೋಧನ್ ಆರ್. ಹೆಗ್ಡೆ 622 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನಿಯಾಗಿ, ರಿಯಾನ್ ಸಲ್ದಾನ 621 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಹಾಗೂ ರಾಜ್ಯಕ್ಕೆ 5ನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಶೇ.100 ಫಲಿತಾಂಶ ದಾಖಲಿಸಿದೆ. ರಾಜ್ಯದಲ್ಲಿ 3ರಿಂದ 9ನೇ ಸ್ಥಾನಗಳನ್ನು 9 ವಿದ್ಯಾರ್ಥಿಗಳು ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.