ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಉದ್ಯೋಗ ಮೇಳ ನಾಳೆ

Job
Published on

ಮೈಸೂರು: ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಸಹಯೋಗದಲ್ಲಿ ಫೆ.8ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ರವಿ ತಿಳಿಸಿದರು.
ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಹಾರಾಣಿ ವಿಜ್ಞಾನ ಕಾಲೇಜಿನ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ 45ರಿಂದ 50ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. ಮೇಳಕ್ಕೆ 1,000-1,500 ಉದ್ಯೋಗಾಕಾಂಕ್ಷಿಗಳು ಬರುವ ನಿರೀಕ್ಷೆ ಇದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.


18ರಿಂದ 30 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರು, ಎಸ್‌ಎಸ್‌ಎಲ್‌ಸಿ ಉತ್ತೀರ್ಣ, ಪಿಯುಸಿ, ಡಿಪ್ಲೊಮಾ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವವರು ಭಾಗವಹಿಸಬಹುದು. ಅಭ್ಯರ್ಥಿಗಳು ಬಯೋಡೇಟಾದ ಕನಿಷ್ಠ 8 ಪ್ರತಿಗಳು, ಕನಿಷ್ಠ 5 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಶೈಕ್ಷಣಿಕ ಅರ್ಹತೆಯ ಜೆರಾಕ್ಸ್ ಪ್ರತಿಗಳು ಮತ್ತು ಆಧಾರ್ ಕಾರ್ಡ್ ತರಬೇಕು ಎಂದು ತಿಳಿಸಿದರು.


ಅಂಗವಿಕಲರು ಕೂಡ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9449864693/ 9483032052 ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಆಯೋಜಕರಾದ ಡಾ.ಕಿರಣ್, ಸುಭಾಷ್ ಚಂದ್ರ, ಡಾ.ಪರಶುರಾಮ ಮೂರ್ತಿ, ಎಂ.ಶಿವರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net