ಕೋಟ-ಪಡುಕೆರೆ ಕಾಲೇಜಿನಲ್ಲಿ ಉದ್ಯೋಗ ಮೇಳ

job fair
Published on

ಕೋಟ: ಕೋಟ-ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ ಸಹಭಾಗಿತ್ವದಲ್ಲಿ ಜೂನ್ 14ರಂದು ಬೆಳಗ್ಗೆ 9ರಿಂದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿ ಮತ್ತು ಸ್ಥಳೀಯ ಕಂಪನಿಗಳು ಆಗಮಿಸುತ್ತಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ, ಎನ್‌ಟಿಸಿ, ಡಿಎಡ್, ಬಿಪಿಎಡ್, ಬಿಎಡ್, ಬಿಎ, ಬಿಕಾಂ, ಬಿಎಸ್‌ಡಬ್ಲುೃ, ಎಂಎಸ್‌ಡಬ್ಲುೃ, ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಬಿಬಿಎ, ಬಿಸಿಎ, ಬಿಟೆಕ್, ಎಂಟೆಕ್ ಸಹಿತ ಪ್ರಸ್ತುತ ಅಂತಿಮ ವರ್ಷದಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ರೆಸ್ಯೂಮ್, ಅಂಕಪಟ್ಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ದಾಖಲೆಗಳೊಂದಿಗೆ ಹಾಜರಾಗಲು ಕಾಲೇಜಿನ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net