ನಿತ್ಯಸಚಿವ ಕೆ.ವಿ.ಶಂಕರಗೌಡ ಜನ್ಮದಿನ: ಜು.15ರಂದು ನಗರದಲ್ಲಿ ಉದ್ಯೋಗ ಮೇಳ

job
Published on

ಮಂಡ್ಯ: ನಿತ್ಯಸಚಿವ ಕೆ.ವಿ.ಶಂಕರಗೌಡ ಜನ್ಮದಿನ ಹಾಗೂ ವಿಶ್ವ ಕೌಶಲ ದಿನದ ಅಂಗವಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಸಹಯೋಗದಲ್ಲಿ ಜು.15ರಂದು ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಮಂಡ್ಯ, ಮೈಸೂರು ಮತ್ತು ಬೆಂಗಳೂರಿನ 30ಕ್ಕೂ ಹೆಚ್ಚು ಹೆಸರಾಂತ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ. ಎಸ್‌ಎಸ್‌ಎಲ್‌ಸಿ, ಪಿ.ಯು.ಸಿ, ಐ.ಟಿ.ಐ(ಯಾವುದೇ ಟ್ರೇಡ್), ಡಿಪ್ಲೊಮೋ(ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಹಾಜರಾಗಬಹುದು. ಮಾಹಿತಿಗೆ ದೂ.ಸಂ 08232-295124 ಮತ್ತು ಮೊ.ಸಂ 8660061488, 9164642684, 8970646629 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net