ಮೇ 14ರಂದು ನಗರದಲ್ಲಿ ಉದ್ಯೋಗಮೇಳ: ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಿಂದ ಆಯೋಜನೆ

job
Published on

ಮಂಡ್ಯ: ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 14ರಂದು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್(ಟಿಸಿಎಸ್) ಬಿಪಿಎಸ್ ವಾಕ್ ಇನ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

2023 ಮತ್ತು 2024 ಬ್ಯಾಚ್‌ನಲ್ಲಿ ಬಿ.ಕಾಂ, ಬಿಬಿಎ, ಬಿಬಿಎಂ, ಬಿಸಿಎ, ಬಿಎ, ಬಿಎಸ್ಸಿ, ಬಿಬಿಐ, ಬಿಎಂಎಸ್ ಮತ್ತು ಬಿಎಎಫ್ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಐಟಿ ಮತ್ತು ಕನ್ಸಲ್ಟಿಂಗ್ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಹೊಂದಿರುವ ಟಿಸಿಎಸ್ ಕಂಪನಿಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಅವಕಾಶ ಒದಗಿಸಲಾಗುತ್ತಿದೆ. ಆಸಕ್ತರು ವೆಬ್‌ಲಿಂಕ್ https://nextstep.tcs.com/campus// ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಅಂತೆಯೇ ಅಂದು ಬೆಳಗ್ಗೆ 9 ಗಂಟೆಗೆ ಕಾಲೇಜಿನ ಕೆ.ವಿ.ಶಂಕರಗೌಡ ಸಭಾಂಗಣದಲ್ಲಿ ಆಯೋಜಿಸಿರುವ ಸಂದರ್ಶನದಲ್ಲಿ ಭಾಗವಹಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net