

ಶನಿವಾರಸಂತೆ: ಸಮೀಪದ ಆಲೂರು- ಸಿದ್ದಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಆಕ್ಸಿಸ್ ಬ್ಯಾಂಕ್ ಹಾಗೂ ವಿವಿಧ ಕೈಗಾರಿಕಾ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ಐಟಿಐ ಕೇಂದ್ರದಲ್ಲಿ ಐಟಿಐ, ಡಿಪ್ಲೊಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು.
ಉದ್ಯೋಗ ಮೇಳದಲ್ಲಿ ಬೆಂಗಳೂರಿನ ಯೂನಿಯನ್ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ಆಕ್ಸಿಸ್ ಬ್ಯಾಂಕ್ ಮುಂತಾದ ಖಾಸಗಿ ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಟೊಯೊಟೋ ಕೈಗಾರಿಕಾ ಸಂಸ್ಥೆ ಮತ್ತು ವಿವಿಧ ಎಲೆಕ್ಟ್ರಾನಿಕ್ ಸಂಸ್ಥೆಗಳ ಅಧಿಕಾರಿಗಳು ಅಭ್ಯರ್ಥಿಗಳ ಸಂದರ್ಶನ ನಡೆಸಿದರು. ಉದ್ಯೋಗ ಮೇಳದಲ್ಲಿ ವಿವಿಧ ಕಡೆಯಿಂದ ಆಗಮಿಸಿದ ನೂರಾರು ಅಭ್ಯರ್ಥಿಗಳು ಭಾಗವಹಿಸಿದ್ದರು.