

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಂತಸದ ಸಂಗತಿ. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗಳು, ಬೆಂಗಳೂರು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಷನ್ ಹಾಗೂ ಯುವಿಎ ಡಿಜಿಟಲ್ ಸಹಯೋಗದಲ್ಲಿ ಉದ್ಯೋಗ ಮೇಳವೊಂದು ನಡೆಯಲಿದೆ.
ಕನಿಷ್ಠ 18ರಿಂದ ಗರಿಷ್ಠ 40 ವಯೋಮಿತಿಯೊಳಗಿನ ಆಸಕ್ತ ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ದಾಖಲೆಗಳು, ಆಧಾರ್ ಕಾರ್ಡ್, 10 ವೈಯುಕ್ತಿಕ ವಿವರದ ಮಾಹಿತಿ ಒಳಗೊಂಡ ಬಯೋಡೇಟಾ ಹಾಗೂ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.
ಮೇ 21ರ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ಲಾಂಗ್ ಫೋರ್ಡ್ ಗಾರ್ಡನ್ನ ಸೇಂಟ್ ಜೋಸೆಫ್ ಕಾಲೇಜ್ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9980853738, 9916181705 ಮತ್ತು 8197239971 ಸಂಪರ್ಕಿಸಬಹುದು.