

ಮಂಡ್ಯ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಮೈಸೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಅ.17ರಂದು ಬೆಳಗ್ಗೆ 9ಗಂಟೆಗೆ ಮೈಸೂರಿನ ಮಹಾರಾಜ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ/ಯುವ ಸಮೃದ್ಧಿ ಸಮ್ಮೇಳನ ಆಯೋಜಿಸಲಾಗಿದೆ.
ಆಸಕ್ತರು ಅಂದು ತಮ್ಮ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ದಾಖಲೆಯ ನಕಲು ಪ್ರತಿಯೊಂದಿಗೆ ಭಾಗವಹಿಸಬಹುದು. ಹೆಸರಾಂತ ಕಂಪನಿಗಳು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ವೆಬ್‌ಸೈಟ್ https://udyogamela.ksdckarnataka.com ಬಳಸಿಕೊಂಡು ಉದ್ಯೋಗಮೇಳದಲ್ಲಿ ಭಾಗವಹಿಸಬಹುದೆಂದು ಪ್ರಕಟಣೆ ತಿಳಿಸಿದೆ.