

ಮೈಸೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ 2022ರ ಸೆಪ್ಟೆಂಬರ್ 24 ರಂದು ಉದ್ಯೋಗ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಹೆಸರಾಂತ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು 18 ರಿಂದ 35 ವರ್ಷ ವಯೋಮಿತಿ ಹೊಂದಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ, ಎಂ.ಬಿ.ಎ, ಸ್ನಾತಕೋತ್ತರ ಪಾಸ್ ಅಥವಾ ಫೇಲ್ ವಿದ್ಯಾರ್ಹತೆ ಅಂಕಪಟ್ಟಿ ಜೇರಾಕ್ಸ್ ಪ್ರತಿ, ಆಧಾರ್ ಕಾಡ್ ಪ್ರತಿ, ಸ್ವ-ವಿವರಯುಳ್ಳ 10 ಬಯೋಡೆಟಾ ಪ್ರತಿಗಳೊಂದಿಗೆ 1 ನೇ ಮೇನ್, 6ನೇ ಅಡ್ಡ ರಸ್ತೆ, ರಾಮಲಿಂಗೇಶ್ವರ ದೇವಸ್ಥಾನದ ಹತ್ತಿರ ವಿದ್ಯಾರಣ್ಯಪುರಂ ಇಲ್ಲಿ ಸಂದರ್ಶಕ್ಕೆ ಹಾಜರಾಗಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮೈಸೂರು-07 ಅನ್ನು ಸಂಪರ್ಕಿಸಬಹುದು ಅಥವಾ ದೂ.ಸಂ: 0821-2489972 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.