ಸೆ.16ರಂದು ಮಂಡ್ಯ ನಗರದಲ್ಲಿ ಉದ್ಯೋಗ ಮೇಳ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಉತ್ತೀರ್ಣರಾದವರಿಗೆ ಅವಕಾಶ

job
Published on

ಮಂಡ್ಯ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕೋಲ್‌ಮನ್ ಸರ್ವಿಸ್ ಜಂಕ್ಷನ್ ಮೈಸೂರು ಸಹಯೋಗದಲ್ಲಿ ಸೆ.16ರಂದು ಉದ್ಯೋಗಕ್ಕೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ(ಯಾವುದೇ ಟ್ರೇಡ್) ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಆಸಕ್ತ ಪುರುಷ ಅಭ್ಯರ್ಥಿಗಳು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ಆಯೋಜಿಸಿರುವ ಸಂದರ್ಶನದಲ್ಲಿ ಸ್ವವಿವರದೊಂದಿಗೆ ಭಾಗವಹಿಸಬಹುದು. ಮಾಹಿತಿಗೆ ದೂ.ಸಂ 08232-295124 ಅಥವಾ ಮೊ.ಸಂ 9164642684 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net