

ಮಂಡ್ಯ: ಜಿಲ್ಲಾಡಳಿತ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಡ್ಯ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಫೆ.7ರಂದು ವಿವಿ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗೆ ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಮತ್ತು ಬಿಎಸ್ಸಿ(ನರ್ಸಿಂಗ್) ಉತ್ತೀರ್ಣರಾಗಿರುವ 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಯೊಂದಿಗೆ ಅಂದು ಬೆಳಗ್ಗೆ 9ಗಂಟೆಗೆ ಹಾಜರಾಗಬಹುದು. ಮಾಹಿತಿಗಾಗಿ ದೂ.ಸಂ 08232-295010, ಮೊ.ಸಂ 8073264498 ಮತ್ತು 7975940277 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.