

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ವಿದ್ಯಾಗಿರಿಯ ಜೆಎಸ್ಎಸ್ನ ಶ್ರೀ ಮಂಜುನಾಥೇಶ್ವರ ಐಟಿಐ ಆವರಣದಲ್ಲಿ ಜು. 14ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಐಟಿಐ ಪಾಸಾದ ಅಥವಾ ಆಗಸ್ಟ್ 2024ರ ಐಟಿಐ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು. ಮೇಳದಲ್ಲಿ 10ಕ್ಕೂ ಹೆಚ್ಚು ಕಂಪನಿಗಳು ವಿವಿಧ ಹುದ್ದೆಗಳಿಗೆ ಸಂದರ್ಶನ ನಡೆಸಲಿವೆ. ಆಸಕ್ತರು ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ಕಾಲೇಜು ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.