28ರಂದು ಉದ್ಯೋಗ ಮೇಳ

jobs1
Published on


ಮೈಸೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅ.28 ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಹೆಸರಾಂತ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಜೆಒಸಿ, ಸ್ನಾತಕೋತ್ತರ ಯಾವುದೇ ಪದವಿಗಳಲ್ಲಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಮೇಳದಲ್ಲಿ ಭಾಗಿಯಾಗಬಹುದು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮೈಸೂರು-07 ಸಂಪರ್ಕಿಸಬಹುದು ಅಥವಾ ದೂ: 0821-2489972 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net