

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕೆಎಲ್ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಡಿ. 5ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
40ಕ್ಕಿಂತ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಡಿಪ್ಲೋಮಾ, ಐಟಿಐ, ಎಂಟೆಕ್, ಬಿಇಡಿ, ಸೇರಿ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು. ಉದ್ಯೋಗ ಆಕಾಂಕ್ಷಿಗಳು ಈ ಮೇಳದ ಸದುಪಯೋಗ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಕಾಲೇಜು ಸಂಪಕಿರ್ಸಬಹುದು ಎಂದು ಕಾಲೇಜಿನ ಪ್ರಾಚಾರ್ಯೆ ಡಾ. ನೀಲಕ್ಕಾ ಪಾಟೀಲ ತಿಳಿಸಿದ್ದಾರೆ.