ಏ.6 ರಂದು ಉದ್ಯೋಗ ಮೇಳ

Published on

ಬಳ್ಳಾರಿ ; ರಾಜ್ಯ ಅಹಿಂದ ಸಂಘಟನೆ ಮತ್ತು ಕ್ಯಾಡ್‌ಮ್ಯಾಕ್ಸ್ ಎಜ್ಯುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಏ. 6ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್‌ನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಅಹಿಂದ ಸಂಘಟನೆ ಜಿಲ್ಲಾಧ್ಯಕ್ಷ ಜೋಗಿನ ಚಂದ್ರಪ್ಪ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ನಿರುದ್ಯೋಗ ಯುವಕ-ಯುವತಿಯರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕ- ಯುವತಿಯರು ಪಾಲ್ಗೊಂಡು ಉದ್ಯೋಗ ಪಡೆದುಕೊಳ್ಳಬೇಕು ಎಂಬುವುದು ನಮ್ಮೆಲ್ಲರ ಆಶಯವಾಗಿದೆ ಎಂದರು.

ಉದ್ಯೋಗ ಮೇಳದಲ್ಲಿ 18 ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮೊ ಮತ್ತು ಪದವಿ, ಸ್ನಾತಕೋತ್ತರ ಪದವಿ ಪಡೆದಿರುವ ಪಾಲ್ಗೊಳಬಹುದು. ಉದ್ಯೋಗ ಮೇಳಕ್ಕೆ ಬರುವ ಅಭ್ಯರ್ಥಿಗಳು ಬಯೋಡೇಟಾ, ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಎರಡು ೆಟೋಗಳು ಹಾಗೂ ಆಧಾರ್ ಕಾರ್ಡ್ ತಪ್ಪದೇ ತರಬೇಕು ಎಂದು ತಿಳಿಸಿದರು.

ರಾಜ್ಯ ಅಹಿಂದ ಸಂಘಟನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಬಟ್ಟಿ ಎರ‌್ರಿಸ್ವಾಮಿ, ಪದಾಧಿಕಾರಿಗಳಾದ ರವಿ, ಪಾಂಡುರಂಗಪ್ಪ ಎಸ್., ನಾಗರಾಜ್ ಇದ್ದರು.

==

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net