ಉದ್ಯೋಗ ಮೇಳ 24ರಂದು

Published on

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆಎಸ್‌ಎಸ್ ಐಟಿಐ ಕಾಲೇಜು ಮತ್ತು ಬಾಷ್ ಕಂಪನಿಯ ಸಹಯೋಗದಲ್ಲಿ ಆ.24ರಂದು ಐಟಿಐ ಉತ್ತೀರ್ಣರಾದ ಹಾಗೂ ಕೊನೆಯ ವರ್ಷದ ಐಟಿಐ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ 20ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 2,100ಕ್ಕೂ ಹೆಚ್ಚು ಹುದ್ದೆಗಳಿಗಾಗಿ ಸಂದರ್ಶನ ನಡೆಸಲಿವೆ. ಧಾರವಾಡ, ಹುಬ್ಬಳ್ಳಿ, ಬೆಂಗಳೂರು, ಬಳ್ಳಾರಿ, ಮೈಸೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಉದ್ಯೋಗಾವಕಾಶಗಳಿವೆ.

ನಗರದ ಜೆಎಸ್‌ಎಸ್ ಉತ್ಸವ ಸಭಾಭವನದಲ್ಲಿ ಉದ್ಯೋಗ ಮೇಳ ಜರುಗಲಿದ್ದು, ಆಸಕ್ತ ವಿದ್ಯಾರ್ಥಿಗಳು ಹಾಜರಾಗಬಹುದು. ವಿದ್ಯಾರ್ಥಿಗಳು ಸ್ವ-ವಿವರ, ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಫೋಟೋ ತರಬೇಕು. ಹೆಸರು ನೋಂದಣಿಗೆ ಆ.23 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net