

ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಸಹಯೋಗದೊಂದಿಗೆ ನಗರದ ಬಾಗಲಕೋಟೆ ರಸ್ತೆಯ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆ. 7 ರಂದು ಉದ್ಯೊಗ ಮೇಳ ನಡೆಯಲಿದೆ.
ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಂಎನ್ಸಿ ಕಂಪನಿಗಳು ಹಾಗೂ ಸ್ಥಳಿಯ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ/ಸ್ನಾತಕೋತ್ತರ ಪದವಿ, ಪಾಸಾದ 35 ವರ್ಷ ವಯಸ್ಸಿನೊಳಗಿನ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿ ಜತೆಗೆ ಕನಿಷ್ಠ 5 ಬಯೋಡೆಟಾ ಮತ್ತು 2 ಸೆಟ್ ಆಧಾರ್ ಕಾರ್ಡ್ ಝರಾಕ್ಸನೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.