ಉದ್ಯೋಗ ಮೇಳದ ಪೂರ್ವ ಸಿದ್ಧತಾ ಸಭೆ

Job fair pre-preparatory meeting
Published on

ಮಡಿಕೇರಿ:

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಇದೇ ತಿಂಗಳು ೨೬ ಮತ್ತು ೨೭ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿಗೆ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಸಲಹೆ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶ’ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಸಂಬAಧ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ, ಬೃಹತ್ ಉದ್ಯೋಗ ಮೇಳ ಸಂಬAಧಿಸಿದAತೆ ಶಾಲಾ ಕಾಲೇಜುಗಳು ಸೇರಿದಂತೆ ಎಲ್ಲೆಡೆ ಮಾಹಿತಿ ನೀಡುವಂತಾಗಬೇಕು. ಬೃಹತ್ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿAಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆ ಹೊಂದಿರುವವರ ಜೊತೆ ಸಮಾಲೋಚನೆ ಮತ್ತು ಪೂರ್ವ ಸಂದರ್ಶನ ಏರ್ಪಡಿಸಬೇಕು. ಕರಪತ್ರ ಮೂಲಕ ಎಲ್ಲೆಡೆ ಮಾಹಿತಿ ನೀಡುವುದು, ನಗರ ಸ್ಥಳೀಯ ಸಂಸ್ಥೆ ಮೂಲಕ ಮಾಹಿತಿ ನೀಡುವುದು, ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಸಹಕಾರ ಪಡೆದು ಹೆಚ್ಚಿನ ಮಾಹಿತಿ ನೀಡುವುದು, ತಾಲೂಕು ಮಟ್ಟದಲ್ಲಿ ತಾಲೂಕು ಕಚೇರಿ, ತಾಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ, ಅಂಗನವಾಡಿ ಕಾರ್ಯಕರ್ತರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂಲಕ ಹೆಚ್ಚಿನ ಮಾಹಿತಿ ನೀಡಿ ಬೃಹತ್ ಉದ್ಯೋಗ ಮೇಳಕ್ಕೆ ೧ ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿಗೆ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಉಮಾ ಮಾತನಾಡಿ ರಾಜ್ಯ ಮಟ್ಟದ ಉದ್ಯೋಗ ಮೇಳದಲ್ಲಿ ೫೦ ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಹಾಗೂ ರಾಜ್ಯದ ಎಲ್ಲಾ ವಲಯಗಳಿಂದ ಪ್ರತಿಷ್ಠಿತ ಬೃಹತ್, ಮಧ್ಯಮ ಮತ್ತು ಸಣ್ಣ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸಲಿದ್ದು, ಯುವ ಜನತೆಗೆ ಉದ್ಯೋಗಾವಕಾಶ ಕಲ್ಪಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದರು.

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ, ಸಹಾಯಕ ಸಾಂಖ್ಯಿಕ ಅಧಿಕಾರಿ ಡಾ.ರೂಪಾ, ಉದ್ಯೋಗ ಅಭಿವೃದ್ಧಿ ಅಧಿಕಾರಿ ಮದನ್ ಕುಮಾರ್ ಅವರು ರಾಜ್ಯ ಮಟ್ಟದ ಉದ್ಯೋಗ ಮೇಳದಲ್ಲಿ ಹಲವು ಉದ್ಯೋಗದಾತ ಸಂಸ್ಥೆಗಳು ಪಾಲ್ಗೊಳ್ಳಲಿವೆ ಎಂದು ಮಾಹಿತಿ ನೀಡಿದರು.
ಉದ್ಯೋಗ ಮೇಳ ಸಂಬAಧಿಸಿದAತೆ ಸಹಾಯವಾಣಿ ಸಂಖ್ಯೆ ೧೮೦೦೫೯೯೯೯೧೮ (ವಿಸ್ತರಣಾ ಸಂಖ್ಯೆ -೪) ಸಂಪರ್ಕಿಸಬಹುದು. ಹಾಗೆಯೇ ಉದ್ಯೋಗದಾತರು ಸಹ ಹೆಸರು ನೋಂದಣಿ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕÀ ಪುಟ್ಟರಾಜು, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕÀ ಬಿ.ಬಸಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ್, ಬಿಸಿಎಂ.ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿವಿ.ಟಿ.ವಿಸ್ಮಯಿ, ಪೌರಾಯುಕ್ತÀ ವಿಜಯ್, ತಾ.ಪಂ.ಇಒ ಜಯಣ್ಣ, ಶಾಲಾ ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಐಟಿಐ ಕಾಲೇಜಿನ ಪ್ರಾಂಶುಪಾಲರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net