ಉದ್ಯೋಗ ಖಾತ್ರಿ : ಪಿಡಿಒಗಳೊಂದಿಗೆ ಮೈಸೂರು ಸಿಇಒ ಸಭೆ

zp mysore
Published on

ಮೈಸೂರು: ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯತ್ರಿ ಧ್ಯಕ್ಷತೆಯಲ್ಲಿ ಬುಧವಾರ ಉದ್ಯೋಗ ಖಾತ್ರಿ ಯೋಜನೆ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಯಿತು.

ಈ ಬಾರಿ ಹಿಂಗಾರು ಹಾಗೂ ಮುಂಗಾರು ವೈಫಲ್ಯದಿಂದ ಜಿಲ್ಲೆಯಲ್ಲಿ ಬರಗಾಲ ಎದುರಾಗಿದೆ. ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸಜ್ಜಾಗಬೇಕು. ಗ್ರಾಮೀಣ ಪ್ರದೇಶದ ಜನರಿಗೆ ಮುಂದಿನ 3 ತಿಂಗಳು ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಹಾಗೂ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು.

ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಉದ್ಯೋಗ ನೀಡಬೇಕು. ಉದ್ಯೋಗ ಖಾತ್ರಿಯಡಿ ನಿಗದಿ ಪಡಿಸಿರುವ ಗುರಿಯನ್ನು ಸಾಧಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಡಾ.ಕೃಷ್ಣರಾಜು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net