ಉದ್ಯೋಗ ಮಾರ್ಗದರ್ಶನ ಕಾರ್ಯಾಗಾರ

byn (9)
Published on

ಬೈಂದೂರು: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಆಗಸ್ಟ್ 1 ಮತ್ತು 2ರಂದು ಮೂಡುಬಿದಿರೆಯಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಸಮೃದ್ಧ ಬೈಂದೂರು ಆಶ್ರಯದಲ್ಲಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾರ್ಗದರ್ಶನದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಮೇಳದಲ್ಲಿ 16,000 ಉದ್ಯೋಗಾವಕಾಶ ಸೃಷ್ಟಿಯಾಗುವ ಸಾಧ್ಯತೆ ಇದೆ. ಹಾಗಾಗಿ ಬೈಂದೂರು ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿಗಳುಆಸಕ್ತಿ ವಹಿಸಿ ಆತ್ಮವಿಶ್ವಾಸದಿಂದ ಉದ್ಯೋಗ ಮೇಳಕ್ಕೆ ಭಾಗವಹಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಪ್ರಾಂಶುಪಾಲ ನಾಗರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಶಂಕರನಾರಾಯಣ ಸರ್ಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪ್ರಜ್ಞಾ, ಬೈಂದೂರು ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಚಿತ್ರ ಪಡಿಯಾರ್, ಪ್ಲೇಸ್ಮೆಂಟ್ ಸೆಲ್ ಆಫೀಸರ್ ವಿನೋದ್ ಪಟ್ಟದ್, ಶಾಸಕರ ಪತ್ನಿ ಅನುರಾಧ ಗುರುರಾಜ್ ಗಂಟಿಹೊಳೆ, ಸಮೃದ್ಧ ಬೈಂದೂರು ಪದಾಧಿಕಾರಿಗಳು, ಕಾಲೇಜಿನ ಅಧ್ಯಾಪಕ ವೃಂದ ಹಾಗೂ 300 ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ನವೀನ್ ಎಚ್.ಜೆ. ಸ್ವಾಗತಿಸಿದರು. ಡಾ.ಆನಂದ್ ಸಿ. ವಂದಿಸಿದರು. ಯೋಗೀಶ್ ಕೈರೋಡಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net