ನಾಳೆ ಉದ್ಯೋಗಕ್ಕೆ ಸಂದರ್ಶನ

Campus Interview
Published on

ಶನಿವಾರಸಂತೆ: ಆಲೂರು-ಸಿದ್ದಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಹಾಗೂ ಆಕ್ಸಿಸ್ ಬ್ಯಾಂಕ್, ಯಾಜಕಿ ಸಂಸ್ಥೆ ಸಹಯೋಗದಲ್ಲಿ ಜು.10ರಂದು ಆಲೂರು-ಸಿದ್ದಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಯುವಕ, ಯುವತಿಯರಿಗೆ ಉದ್ಯೋಗ ಸಂದರ್ಶನಕ್ಕೆ ಸಂದರ್ಶನ ನಡೆಯಲಿದೆ.

ಐಟಿಐ, ಡಿಪ್ಲೊಮಾ, ಪಿಯುಸಿ ಪಾಸಾದ ನಿರುದ್ಯೋಗಿಗಳು ಸೇರಿದಂತೆ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ, ಬಿಸಿಎ ಹಾಗೂ ಎಂಕಾಂ, ಎಂಬಿಎ, ಎಂಸಿಎ, ಎಂಎ, ಬಿ.ಇಡಿ ಪದವಿ ಹಾಗೂ ಸ್ನಾತ್ತಕೋತ್ತರ ಪದವೀಧರ ನಿರುದ್ಯೋಗಿ ಯುವಕ, ಯುವತಿಯರು ಪಾಲ್ಗೊಳ್ಳಬಹುದು. ಬೆಳಗ್ಗೆ 10 ಗಂಟೆಯಿಂದ ಅಭ್ಯರ್ಥಿಗಳ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಅಂಕಪಟ್ಟಿ, ಐದು ಭಾವಚಿತ್ರ, ಆಧಾರ್, ಪ್ಯಾನ್‌ಕಾರ್ಡ್ ದಾಖಲೆಗಳೊಂದಿಗೆ ಹಾಜರಾಗುವಂತೆ ಐಟಿಐ ಕಾಲೇಜಿನ ಪ್ರಾಂಶುಪಾಲ ಯೋಗೇಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net